ಚಾಮರಾಜನಗರ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಅಂಕಪ್ಪ ಸ್ವಾಮಿ (75) ಗಾಯಗೊಂಡ ರೈತನಾಗಿದ್ದಾನೆ.

ಘಟನೆಯ ವಿವರ: ರೈತ ಅಂಕಪ್ಪ ಸ್ವಾಮಿರವರ ಜಮೀನಿನಲ್ಲಿ ಬೆಳೆದಿರುವ ಹಲಸಿನ ಹಣ್ಣನ್ನು ಕಾಡಾನೆ ತಿನ್ನಲು ಬಂದಿದೆ. ಈ ವೇಳೆ ರೈತ ಕಾಡಾನೆಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ ಆನೆ ರೈತನ ಮೇಲೆ ದಾಳಿ ಮಾಡಿ ಎತ್ತಿ ಬಿಸಾಡಿದೆ. ಈ ವೇಳೆ ರೈತನ ಕಾಲು ಹಾಗೂ ಕತ್ತಿನ ಮೂಳೆ ಮುರಿದಿದೆ. ತಕ್ಷಣ ಕುಟುಂಬಸ್ಥರು ಖಾಸಗಿ ವಾಹನದ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಚಿರತೆ ದಾಳಿ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಕ್ಷೇತ್ರಕ್ಕೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಒಂದು ದಿನದ ಅಂತರದಲ್ಲಿ ಕಾಡಾನೆ ದಾಳಿ ನಡೆಸಿರುವುದು ರೈತರ, ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಜಮೀನಿನಲ್ಲಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಗಾಯಗೊಂಡಿರುವ ರೈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸಾ ವೆಚ್ಚವನ್ನು ಇಲಾಖೆ ವತಿಯಿಂದಲೇ ಭರಿಸಲಾಗುವುದು ಹಾಗೂ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಡಿಸಿಎಫ್ ಭಾಸ್ಕರ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

13 ವರ್ಷ ಹಳೆಯ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಗೆ ಪೊಲೀಸ್ ನೋಟಿಸ್‌

ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್‌…

12 hours ago

ದೀಪಾವಳಿ ಬಳಿಕ ಬೆಂಗಳೂರಲ್ಲಿ ವಾಯುಮಾಲಿನ್ಯ ಏರಿಕೆ, AQI 186ಕ್ಕೆ

ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…

12 hours ago

ರೇಷನ್ ಕಾರ್ಡ್ ಇ-ಕೆವೈಸಿಗೆ ಇಂದೇ ಕೊನೆ ದಿನ!

ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ…

12 hours ago

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ! ನಾಳೆ ಗರ್ಭಗುಡಿ ಬಾಗಿಲು ಬಂದ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್‌ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ…

15 hours ago

ಓದುಗರ ಪತ್ರ: ಈ ದೀಪ ಪ್ರೀತಿಯ ರೂಪ

ಈ ದೀಪ ಪ್ರೀತಿಯ ರೂಪ ನಾನೊಂದು ದೀಪ ಹಚ್ಚುತ್ತೇನೆ ನಮ್ಮೊಳಗಿನ ಅಜ್ಞಾನ, ಅಹಂ ಅಂಧಕಾರವೆಲ್ಲಾ ಅಳಿದು, ಸುಜ್ಞಾನದ ಬೆಳಕು ಬೆಳಗಲಿಯೆಂದು…

15 hours ago

ಓದುಗರ ಪತ್ರ: ಮೈಸೂರಿಗೆ ಮತ್ತೊಂದು ಪ್ರಶಸ್ತಿಯ ಗರಿ

೨೦೨೫-೨೬ ರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕೊಡಮಾಡುವ ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿಗೆ ಮೈಸೂರು ಭಾಜನವಾಗಿರುವುದು…

16 hours ago