Mysore
25
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಕಾಡಾನೆ ದಾಳಿ: ಓರ್ವ ಸಾವು, ಮತ್ತೋರ್ವ ಪ್ರಾಣಾಪಾಯದಿಂದ ಪಾರು

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲ್ಲೂಕಿನ ಮೀಣ್ಯಂ ಬಳಿ ನಡೆದಿದೆ.

ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಮುನಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಮುನಿಯಪ್ಪ ಹಾಗೂ ಅವರ ಸ್ನೇಹಿತ ಕುಳ್ಳುಚ್ಚ ಎಂಬುವವರು ಒಡೆಯರಪಾಳ್ಯ ಜಮೀನೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಾರ್ಯನಿಮಿತ್ತ ಗ್ರಾಮಕ್ಕೆ ಬಂದು ಕೆಲಸ ಮುಗಿದ ನಂತರ ವಾಪಸ್‌ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.

ಮುನಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಳ್ಳುಚ್ಚರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಸದ್ಯ ಕುಳ್ಳುಚ್ಚ ಚಿಕಿತ್ಸೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags: