ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲ್ಲೂಕಿನ ಮೀಣ್ಯಂ ಬಳಿ ನಡೆದಿದೆ.
ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಮುನಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ಮುನಿಯಪ್ಪ ಹಾಗೂ ಅವರ ಸ್ನೇಹಿತ ಕುಳ್ಳುಚ್ಚ ಎಂಬುವವರು ಒಡೆಯರಪಾಳ್ಯ ಜಮೀನೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಾರ್ಯನಿಮಿತ್ತ ಗ್ರಾಮಕ್ಕೆ ಬಂದು ಕೆಲಸ ಮುಗಿದ ನಂತರ ವಾಪಸ್ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.
ಮುನಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಳ್ಳುಚ್ಚರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಸದ್ಯ ಕುಳ್ಳುಚ್ಚ ಚಿಕಿತ್ಸೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…