ಚಾಮರಾಜನಗರ

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಲಗ್ಗೆ ಇಟ್ಟು ಕಷ್ಟಪಟ್ಟು ಬೆಳೆದಿರುವ ಬಾಳೆ, ಮೆಣಸಿ, ಎಲೆಕೋಸು ಆಲೂಗೆಡ್ಡೆ, ಮುಸುಕಿನ ಜೋಳ ಬೆಳ್ಳುಳ್ಳಿ ಬೆಳೆಗಳನ್ನು ನಾಶಪಡಿಸುತ್ತಿದೆ. ಇದಲ್ಲದೆ ಕೃಷಿ ಪರಿಕರಗಳನ್ನು ನಾಶಪಡಿಸುತ್ತಿರುವುದರಿಂದ ಈ ಭಾಗದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಫೆಬ್ರವರಿ.21ರಂದು ಈ ಭಾಗದ ರೈತರು ಕಾಡುಪ್ರಾಣಿಗಳ ಹಾವಳಿ ತಡೆಯುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ವಲಯ ಅರಣ್ಯಾಧಿಕಾರಿಗಳು ಕಾಡಾನೆ ಹಾವಳಿ ನಿಯಂತ್ರಣ ಮಾಡುವುದಾಗಿ ಭರವಸೆ ನೀಡಿದ್ದರು, ಆದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಸಾಲ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆದಿರುವ ಬೆಳೆಯು ಕೈ ಸೇರುತಿಲ್ಲ ಇದರಿಂದ ಸಂಕಷ್ಟಕ್ಕೀಡಾಗಿದ್ದು, ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಆನೆ ದಾಳಿ ನಿರಂತರವಾಗಿ ಮುಂದುವರೆದರೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಈ ಭಾಗದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮುಂಜಾನೆಯು ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಗುಡಿ ಶೆಟ್ಟಿ ದೊಡ್ಡಿ ಗ್ರಾಮದ ರೈತನೆ ಮೇಲೆ ಕಾಡಾನೆ ದಾಳಿ ಮಾಡಿರುವುದರಿಂದ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದೀಗ ಬುಧವಾರ ಮಧ್ಯಾಹ್ನ ಒಂಟಿ ಸಲಗ ಒಂದು ಮಧ್ಯಾಹ್ನ 12 ಗಂಟೆ ವೇಳೆ ರಸ್ತೆ ಬದಿಯಲ್ಲಿಯೇ ಅಡ್ಡಾಡುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೆ ಸಂಚಾರ ಮಾಡುತ್ತಿದ್ದಾರೆ. ಇನ್ನು ಮುಂದಾದರು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವವರೆ ಎಂದು ಕಾದು ನೋಡಬೇಕಿದೆ.

 

 

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

4 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

7 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

8 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

8 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

8 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

8 hours ago