ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು.
ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ ಓಡಿಸಲು ಹರಸಾಹಸ ಪಟ್ಟರು.
ಈ ವೇಳೆ ಪಟಾಕಿ ಸಿಡಿಸಿ ಎರಡು ಆನೆಗಳನ್ನು ಕಾಡಿಗೆ ಓಡಿಸಲಾಯಿತು.
ಇನ್ನು ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಇನ್ನು ಮುಂದಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.