ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ ಎಲಚೆಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.
30 ರಿಂದ 35 ವರ್ಷದ ಆನೆ ಇದಾಗಿದ್ದು, ಆನೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸದ್ಯ ವರದಿ ಬಂದ ಬಳಿಕವೇ ಆನೆ ಸಾವಿಗೆ ಏನೆಂದು ತಿಳಿದು ಬರಲಿದೆ.