Mysore
27
scattered clouds

Social Media

ಸೋಮವಾರ, 23 ನವೆಂಬರ್ 2026
Light
Dark

ಬಂಡೀಪುರದ ಕುಂದುಕೆರೆ ವಲಯದಲ್ಲಿ ಗಂಡಾನೆ ಕಳೇಬರ ಪತ್ತೆ!

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ.

ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ ಕಳೇಬರ ಕಂಡ ಅರಣ್ಯ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಆನೆಗೆ ಸುಮಾರು 15 ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ.

ಹೊಟ್ಟೆನೋವಿನಿಂದ ಮೃತಪಟ್ಟಿರಬಹುದೆಂದು ವೈದ್ಯರು ಶಂಕಿಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!