Mysore
29
overcast clouds

Social Media

ಮಂಗಳವಾರ, 03 ನವೆಂಬರ್ 2026
Light
Dark

ಗುಂಡ್ಲುಪೇಟೆ: ಗರ್ಭಿಣಿ ಆನೆಯ ಮೃತದೇಹ ಪತ್ತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಗರ್ಭಿಣಿ ಕಾಡಾನೆಯ ಮೃತದೇಹ ಪತ್ತೆಯಾಗಿದೆ.

ಅರಣ್ಯದ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಜಮೀನಿನಲ್ಲಿ ಆನೆ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ. ತಾಯಿ ಆನೆಯೊಂದಿಗೆ ಮತ್ತೊಂದು ಜೀವವೂ ಅಂತ್ಯಗೊಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವೈದ್ಯರಿಂದ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಪ್ರಾಥಮಿಕ ವರದಿಯ ಪ್ರಕಾರ ಗರ್ಭಿಣಿ ಆನೆ ಕಾದಾಟದಿಂದ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

 

 

Tags:
error: Content is protected !!