ಚಾಮರಾಜನಗರ

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು ೫೦ ಮೀಟರ್ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.

ಮೃತ ಆನೆಯು ಸುಮಾರು ೨೫ ವರ್ಷ ವಯಸ್ಸಿನ ಗಂಡಾನೆಯಾಗಿದ್ದು, ಮೇಲ್ನೋಟಕ್ಕೆ ಇತರೆ ಆನೆಗಳೊಂದಿಗಿನ ಕಾದಾಟದಿಂದ ಗಾಯಗೊಂಡು ಸಾವಿಗೀಡಾಗಿರಬಹುದು ಎಂದು ಹೇಳಲಾಗಿದೆ. ಘಟನೆಯ ಸಂಬಂಧ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಿಆರ್‌ಟಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪಶುವೈದ್ಯಾಧಿಕಾರಿ ಸಮ್ಮುಖದಲ್ಲಿ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಹೆಚ್ಚಿನ ಪರಿಶೀಲನೆಗಾಗಿ ಮೃತ ಆನೆಯ ಅಂಗಾಂಗ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ಧಾರೆ.

 

ಆಂದೋಲನ ಡೆಸ್ಕ್

Recent Posts

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

14 mins ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

3 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

7 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

8 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

8 hours ago