ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ.
ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ನಂತರ ಎಸಿಎಫ್ ಶಿವರಾಮು, ವಲಯ ಅರಣ್ಯಾಧಿಕಾರಿ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವ ಆನೆ ಸುಮಾರು 40 ವರ್ಷ ವಯಸ್ಸಿನದ್ದಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಮಲೆ ಮಹದೇಶ್ವರ ವನ್ಯದಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಪುಟ್ಟರಾಜು, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು ಅವರ ಸಮ್ಮುಖದಲ್ಲಿ ಹೆಣ್ಣಾನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…