ಚಾಮರಾಜನಗರ

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ.

ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ನಂತರ ಎಸಿಎಫ್ ಶಿವರಾಮು, ವಲಯ ಅರಣ್ಯಾಧಿಕಾರಿ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವ ಆನೆ ಸುಮಾರು 40 ವರ್ಷ ವಯಸ್ಸಿನದ್ದಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಮಲೆ ಮಹದೇಶ್ವರ ವನ್ಯದಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ‌.ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಪುಟ್ಟರಾಜು, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು ಅವರ ಸಮ್ಮುಖದಲ್ಲಿ ಹೆಣ್ಣಾನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago