ಚಾಮರಾಜನಗರ

ಆನೆ ಜೊತೆ ಸೆಲ್ಫಿಗಾಗಿ ಹುಚ್ಚಾಟ ಪ್ರಕರಣ: ಅರಣ್ಯ ಇಲಾಖೆಗೆ ದಂಡ ಕಟ್ಟಿದ ವ್ಯಕ್ತಿ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ.

ರಸ್ತೆಗೆ ಬಂದ ಕಾಡಾನೆಯನ್ನು ಕಂಡ ಪ್ರವಾಸಿಗರು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ತಿರುಗಿ ಬಂದ ಆನೆಯನ್ನು ಕಂಡು ಪ್ರವಾಸಿಗರು ವಾಪಸ್‌ ಆಗಿದ್ದರು.

ಆನೆ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಾಣಿಪ್ರಿಯರು ಪ್ರವಾಸಿಗರ ವಿರುದ್ಧ ಕಠಿಣ ಕ್ರಮ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪ್ರವಾಸಿಗರೊಬ್ಬರು ಅರಣ್ಯ ಇಲಾಖೆಗೆ 25 ಸಾವಿರ ದಂಡ ಕಟ್ಟಿ ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಬಂಡೀಪುರ ಅರಣ್ಯದಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದೆ. ಇದು ಕಾನೂನು ಬಾಹಿರ ಎಂದು ಗೊತ್ತಾದ ಮೇಲೆ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಈ ರೀತಿಯ ತಪ್ಪನ್ನು ಎಂದಿಗೂ ಮಾಡಲ್ಲ. ಯಾರೂ ಕೂಡ ಕಾಡು ಪ್ರಾಣಿಗಳಿಗೆ ಹಿಂಸೆ ಕೊಡಬೇಡಿ. ಕಾಡಿನೊಳಗೆ ಪ್ಲಾಸ್ಟಿಕ್‌ಗಳನ್ನು ಎಸೆಯಬಾರದು. ಪ್ರಾಣಿಗಳಿಗೆ ಕಿರಿಕಿರಿ ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

5 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

5 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

8 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

8 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

8 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

9 hours ago