ಚಾಮರಾಜನಗರ

ಮ.ಬೆಟ್ಟ | ದಾರಿ ಮಧ್ಯೆ ಕಾಡಾನೆ ಪ್ರತ್ಯಕ್ಷ ; ಕ್ರಮವಹಿಸಿ ತೆರಳುವಂತೆ ಮನವಿ

ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾಡಾನೆಗಳು ಬೆಳಗಿನ ವೇಳೆಯೇ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೇ ತೆರಳುತ್ತಿದ್ದಾರೆ.

ಭಾನುವಾರ ಮಧ್ಯಾಹ್ನ ಕಾಡಾನೆಯೊಂದು ಮೇವನ್ನು ಅರಸಿ ಬಂದು ರಸ್ತೆ ಬಳಿಯೇ ನಿಂತಿರುವುದನ್ನು ದಾರಿಹೋಕರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಒಂದು ತಿಂಗಳಿನಿಂದ ಕಾಡಾನೆಗಳು ನಿರಂತರವಾಗಿ ಮಾರ್ಗ ಮಧ್ಯದಲ್ಲಿಯೇ ಚಲಿಸುತ್ತಿರುವುದು, ಚೆಕ್ ಡ್ಯಾಮ್‌ನಲ್ಲಿ ಜಲ ಕ್ರೀಡೆಯಲ್ಲಿ ತೊಡಗುವುದು ಮಾಡುತ್ತಿರುವುದರಿಂದ ಮ.ಬೆಟ್ಟ ಹಾಗೂ ಕಾಡಂಚಿನ ಗ್ರಾಮಗಳಿಗೆ ಹೋಗುವ ಸಾರ್ವಜನಿಕರು ಬೆಳಗಿನ ವೇಳೆಯಲ್ಲಿ ಪ್ರಯಾಣ ಮಾಡಬೇಕು. ರಾತ್ರಿಯ ವೇಳೆ ಅನಗತ್ಯವಾಗಿ ಪ್ರಯಾಣ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

17 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

34 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

44 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

52 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago