ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಕ್ರಮ ಬೇಟೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋಣಿಸ್ವಾಮಿ, ಪೀಟರ್, ಕುಮಾರ್ ಎಂದು ಗುರುತಿಸಲಾಗಿದೆ.
ಮೃತ ಮೂವರ ಶವಗಳನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ವಿವರಗಳು ಹೊರಬೀಳಲಿವೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ. ಸಂಪೂರ್ಣ ಮಾಹಿತಿಯನ್ನು ಅರಣ್ಯ ಇಲಾಖೆಯವರು ನೀಡಬೇಕಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…