Mysore
18
broken clouds

Social Media

ಸೋಮವಾರ, 26 ಜನವರಿ 2026
Light
Dark

ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಎಲ್ಲರೂ ಅನಿವಾರ್ಯ: ಸಚಿವ ವೆಂಕಟೇಶ್‌

ಚಾಮರಾಜನಗರ: ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲರೂ ಅನಿವಾರ್ಯವೇ ಎಂದು ಹೇಳಿದರು.

ಇನ್ನು ನವೆಂಬರ್‌ ಕ್ರಾಂತಿ ಕುರಿತು ನನಗೆ ಏನೂ ಗೊತ್ತಿಲ್ಲ ಎಂದ ಅವರು, ಮಾನವ-ವನ್ಯಜೀವಿ ಸಂಘರ್ಷ ವಿಚಾರದ ಕುರಿತು ನಾಳೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಹೇಳಿದರು.

Tags:
error: Content is protected !!