ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್.ಮಹೇಶ್ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್. ಮಹೇಶ್ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ ವಿರೋಧಿಸಿ ಪ್ಲೆಕ್ಸ್ ಅಳವಡಿಸಿ ಬಹಿಷ್ಕಾರ ಬೆದರಿಕೆ ಹಾಕಿದ್ದಾರೆ.
ನಗರದ ಭೀಮನಗರದ ಎರಡೂ ಹೆಬ್ಬಗಿಲುಗಳಲ್ಲೂ ಸಂವಿಧಾನ ವಿರೋಧಿ, ಸಮುದಾಯ ವಿರೋಧಿ ಎನ್, ಮಹೇಶ್‌ಗೆ ಭೀಮನಗರಕ್ಕೆ ಪ್ರವೇಶವಿಲ್ಲ ಎಂಬ ಪ್ಲೆಕ್ಸ್‌ನ್ನು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಈ ಪ್ಲೆಕ್ಸ್ ಅಳವಡಿಸಿದ ಅರ್ಧಗಂಟೆ ಒಳಗಾಗಿ ತೆರವು ಮಾಡಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಪ್ಲೆಕ್ಸ್‌ಗಳ ಅಳವಡಿಕೆಗೆ ಅನುಮತಿಯಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಗ್ರಾಮದ ಕೆಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…