ಚಾಮರಾಜನಗರ

ಪಿಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ಹೆಚ್ಚುವರಿ ಸಫಾರಿ ವಾಹನ

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿ ಜಿ ಪಾಳ್ಯ ಸಫಾರಿ ಕೇಂದ್ರವು ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದು ಇದುವರೆಗೂ ಎರಡು ಸಫಾರಿ ವಾಹನಗಳಲ್ಲಿ ವನ್ಯಜೀವಿ ಪ್ರಿಯರನ್ನು ಕರೆದೊಯ್ಯಲಾಗುತ್ತಿತ್ತು. ಆದರೆ ಪ್ರವಾಸಿಗರ ಸಂಖ್ಯೆಗೆ ತಕ್ಕಂತೆ ವಾಹನದ ಸೌಲಭ್ಯ ಇಲ್ಲದೆ ಇರುವುದರಿಂದ ಟಿಕೆಟ್ ಸಿಗದೇ ನಿರಾಸೆಯಿಂದ ವಾಪಸ್ ತೆರಳುತ್ತಿದ್ದರು.

ಹೀಗಾಗಿ ವನ್ಯಜೀವಿ ಪ್ರಿಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಒಂದು ವಾಹನದ ಸೌಲಭ್ಯ ಕಲ್ಪಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ಹೊಸದಾಗಿ ಒಂದು ವಾಹನ ನೀಡಿದ್ದು ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಮೂರು ವಾಹನಗಳಲ್ಲಿ ಪ್ರವಾಸಿಗರನ್ನು ಸಫಾರಿಗೆ ಕರೆದುಕೊಂಡು ಹೋಗಲಿದ್ದಾರೆ.

ಕಳೆದ 9 ತಿಂಗಳ ಅವಧಿಯಲ್ಲಿ 2700 ಪ್ರವಾಸಿಗರು, 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 11 ಲಕ್ಷ ಆದಾಯ ಬಂದಿದೆ. ಸಫಾರಿಗೆ ಬರುವ ಪ್ರವಾಸಿಗರ ವಾಹನಕ್ಕೆ ಪ್ರವೇಶ ಶುಲ್ಕ ನೂರು ರೂಪಾಯಿ ನಿಗದಿಪಡಿಸಲಾಗಿದೆ.

ಸಫಾರಿ ಪ್ರಾರಂಭವಾದ ದಿನದಿಂದ ಸಫಾರಿಗೆ ತೆರಳುವವರಿಗೆ ಆನೆ, ಕಾಡೆಮ್ಮೆ, ಚಿರತೆ ,ಕಡವೆ, ಕರಡಿ, ಆಮೆ, ಸೀಳು ನಾಯಿ, ಮುಂಗುಸಿ, ಉಡ ಮಾತ್ರ ಕಾಣಸಿಗುತ್ತಿತ್ತು. ಆದರೆ ಇತ್ತೀಚೆಗೆ ಸುಮಾರು 20ಕ್ಕೂ ಹೆಚ್ಚು ಬಾರಿ ಪ್ರವಾಸಿಗರಿಗೆ ಹುಲಿರಾಯನ ದರ್ಶನ ಸಿಕ್ಕಿದೆ.

ರಜಾ ದಿನಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರವಾಸಿಗರು, ವಾರದ ದಿನಗಳಲ್ಲಿ 10ಕ್ಕೂ ಹೆಚ್ಚು ಜನರು ಆಗಮಿಸುತ್ತಾರೆ. ಕೆಲವೊಮ್ಮೆ ಹೆಚ್ಚು ಪ್ರವಾಸಿಗರು ಆಗಮಿಸಿ ಟಿಕೆಟ್ ಸಿಗದೇ ನಿರಾಸೆಯಿಂದ ವಾಪಸ್ ತೆರಳುತ್ತಿದ್ದರು. ಇದೀಗ ಇನ್ನೊಂದು ವಾಹನ ಬಂದಿರುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲ ಸಿಗಲಿದೆ. – ವಿಠ್ಠಲ್, ಸಫಾರಿ ವಾಹನಗಳ ಮೇಲುಸ್ತುವಾರಿ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

25 mins ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

29 mins ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

34 mins ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

39 mins ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

10 hours ago