Mysore
31
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಕೌಟುಂಬಿಕ ಕಲಹ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಚಾಮರಾಜನಗರ: ಚಾ.ನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗ್ರಾಮದ ಮಹದೇವ ಸ್ವಾಮಿ(45), ಇವರ ಪತ್ನಿ ಸವಿತಾ (35), ಮಗಳು ಸಿಂಚನಾ (14) ಮೃತ ದುರ್ದೈವಿಗಳಾಗಿದ್ದಾರೆ.

ಆಸ್ತಿ ವಿಚಾರದಲ್ಲಿ ಗಲಾಟೆ ಹಾಗೂ ಸಾಲದ ಬಾಧೆಯಿಂದ ನೊಂದು ಸಾವಿಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಸ್ಥಳಕ್ಕಾಗಮಿಸಿದ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವಗಳನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!