ಹನೂರು : ಜಾನುವಾರುಗಳಿಗೆ ಮೇವು ಕತ್ತರಿಸುವಾಗ ಮೇವು ಕತ್ತರಿಸುವ ಯಂತ್ರದ ವಿದ್ಯುತ್ ಸ್ಪರ್ಶಿಸಿ ರೈತ ಮತಪಟ್ಟಿರುವ ಘಟನೆ ಹನೂರು ತಾಲೂಕಿನ ಬೈರನತ್ತ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ದೇವಪ್ಪ ರವರ ಮಗ ಮಹೇಶ್ (50) ಮೃತಪಟ್ಟ ರೈತರಾಗಿದ್ದಾರೆ.
ಘಟನೆಯ ವಿವರ ಬೈರನತ್ತ ಗ್ರಾಮದ ಮಹೇಶ್ ಅವರು ತಮ್ಮ ಜಮೀನಿನಲ್ಲಿ ಚಿಕ್ಕದಾಗಿ ಫಾರಂ ಮಾಡಿಕೊಂಡು ಸುಮಾರು 20ಕ್ಕೂ ಹೆಚ್ಚು ಇಲಾಚಿಗಳನ್ನು ಸಾಕಿಕೊಂಡು ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಬುಧವಾರ ಬೆಳಗ್ಗೆ ಹಸುಗಳಿಗೆ ಮೇವು ಕತ್ತರಿಸುವಾಗ ಯಂತ್ರದಿಂದ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಇವರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




