ಚಾಮರಾಜನಗರ

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ಜರುಗಿದೆ.

ಹನೂರು ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಗೂಡಿ ದೊಡ್ಡಿ ಗ್ರಾಮದ ರೈತ ಪ್ರಭುಸ್ವಾಮಿ (55) ಎಂಬುವವರೇ ಗಾಯಗೊಂಡವರಾಗಿದ್ದಾರೆ.

ಘಟನೆಯ ವಿವರ: ರೈತ ಪ್ರಭುಸ್ವಾಮಿ ಎಂಬುವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ಫಸಲನ್ನು ಕಾವಲು ಕಾಯುತ್ತಿದ್ದ ವೇಳೆ ಬುಧವಾರ ಮುಂಜಾನೆ ಮೂರು ಗಂಟೆಯ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ತೀವ್ರ ಗಾಯಗೊಂಡು ನರಳಾಡುತ್ತಿದ್ದಾಗ ಸಮೀಪದ ಜಮೀನಿನವರೆಗೆ ಮಾಹಿತಿ ತಿಳಿದು ಪಿ.ಜಿ.ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿನ ಕೆವಿಸಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.

ಗಾಯಗೊಂಡಿದ್ದ ರೈತ ಪ್ರಭುಸ್ವಾಮಿ ರವರನ್ನು ಪಿಜಿ ಪಾಳ್ಯ ವಲಯ ಅರಣ್ಯಾಧಿಕಾರಿ ಪುಟ್ಟರಾಜು ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

5 mins ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

58 mins ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

1 hour ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

4 hours ago