ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ
ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…