ಚಾಮರಾಜನಗರ

ಕಾಡು ಪ್ರಾಣಿಗಳಿಂದ ಬೆಳೆ ನಾಶ: ಪರಿಹಾರಕ್ಕೆ ರೈತನ ಮನವಿ

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ

ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago