ಚಾಮರಾಜನಗರ

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 153 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ರೈತರು ಅಂತ್ಯಗೊಳಿಸಿದ್ದಾರೆ.

ಹನೂರು ತಾಲ್ಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ದಂಟಳ್ಳಿ ಮಾರ್ಗವಾಗಿ ಮಾರ್ಟಳ್ಳಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ 152 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಶಾಸಕರು ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿದ್ದರು ರೈತರು ಮಾತ್ರ ಡಿಪಿಆರ್ ಆಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು. ಬಜೆಟ್ ನಲ್ಲಿ 490 ಕೋಟಿ ಯೋಜನೆ ಅನುಮೋದನೆಯಾದ ನಂತರ ಶಾಸಕ ಮಂಜುನಾಥ್ ಭೇಟಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸುವುದಾಗಿ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದೇನೆ. ಆ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ರಾಮನಗುಡ್ಡ ಹಾಗೂ ಹುಬ್ಬೆ ಹುಣಸೆಜಲಾಶಯಕ್ಕೆ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ ಹಳ್ಳದಲ್ಲಿ ನೀರು ಹರಿಸುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳಲ್ಲಿ ಉತ್ತಮವಾಗಿ ನೀರು ಬರುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಮುಂದಿನ ಒಂದು ತಿಂಗಳೊಳಗೆ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಲು ಭೂಮಿ ಪೂಜೆ ಸಲ್ಲಿಸಲಾಗುವುದು. ಹುಬ್ಬೆ ಹುಣಸೆ ಜಲಾಶಯಕ್ಕೆ ಪೈಪ್‌ಲೈನ್ ಕಾಮಗಾರಿ ಮಾಡಲು 20 ಕೋಟಿಗಳ ಅವಶ್ಯಕತೆ ಇದೆ. ಆದರೆ ಕಣ್ಣೂರು ಗ್ರಾಮದಿಂದ ಹಳ್ಳದ ಮೂಲಕ ನೀರು ಹರಿಸಿ ಪೈಪ್‌ಲೈನ್ ಪೂರ್ಣಗೊಳಿಸಲು 10 ಕೋಟಿಗಳ ಅವಶ್ಯಕತೆ ಇದೆ. ಇನ್ನು ಒಂದು ತಿಂಗಳು ತುಂಬಿಸಲು ಕ್ರಮ ವಹಿಸಲಾಗುವುದು. ಇದರಿಂದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

1 second ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

7 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

13 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

33 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

42 mins ago