ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ ರೈತರು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಹಲವು ರೈತರು ಅಕ್ರಮವಾಗಿ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಲಾರಿ ಹಾಗೂ ಟಿಪ್ಪರ್‌ಗಳನ್ನು ತಡೆದು ಕಿಡಿಕಾರಿದ್ದಾರೆ.
ಪ್ರತಿನಿತ್ಯ ನೂರಾರು ಲಾರಿಗಳಿಂದ ಕಲ್ಲು, ಎಂ ಸ್ಯಾಂಡ್ ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಕರ್ನಾಟಕದ ಸಂಪತ್ತು ಅನ್ಯ ರಾಜ್ಯದ ಪಾಲಾಗುತ್ತಿರುವುದನ್ನು ತಡೆಯಲು ರೈತರು ಒತ್ತಾಯಿಸಿದ್ದಾರೆ. ಇದರಲ್ಲಿ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.





