ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮದ ಸರ್ವೆ ನಂಬರ್ 3ರಲ್ಲಿ ಬೆಳೆದಿದ್ದ 0.50 ಎಕರೆ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಜಮೀನಿಗೆ ಹಾಕಿದ್ದ ತಂತಿ ಬೇಲಿ, ಮೆಸ್ ಎಲ್ಲವೂ ಕೊಚ್ಚಿ ಹೋಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದೇ ಗ್ರಾಮದ ಶಿವಪ್ಪ ಅವರು ಬೆಳೆದಿದ್ದ ಅರಿಶಿಣ ಬೆಳೆ, ನಾಗರಾಜು ನಾಯ್ಡು ಅವರು ಬೆಳೆದಿದ್ದ ಮೆಕ್ಕೆಜೋಳದ ಬೆಳೆಯೂ ಸಂಪೂರ್ಣ ನಾಶವಾಗಿದೆ.
ಎರಡು ಎಕರೆ ಆಲೂಗಡ್ಡೆ ಬೆಳೆ ನಾಶ: ತಡರಾತ್ರಿ ಬಿದ್ದ ಮಳೆಗೆ ಶಾರದಮ್ಮ ಅವರಿಗೆ ಸೇರಿದ ಸರ್ವೆ ನಂಬರ್ 287ರಲ್ಲಿದ್ದ ಎರಡು ಎಕರೆ ಆಲೂಗಡ್ಡೆ ಬೆಳೆ ಸಂಪೂರ್ಣ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಲೊಕ್ಕನಹಳ್ಳಿ ಹೋಬಳಿಯ ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮಾರುತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆ ಗೋಡೆ ಕುಸಿತ – ಸ್ವಲ್ಪದರಲ್ಲೇ ಪಾರಾದ ಕುಟುಂಬ: ಹನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ 2ನೇ ವಾರ್ಡಿನ ಸೊಪ್ಪಿನಕೇರಿ ಬೀದಿಯ ರಾಜು ಅವರಿಗೆ ಸೇರಿದ ಮನೆಯ ಮಣ್ಣಿನ ಗೋಡೆ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯವರು ಬೇರೆ ಕಡೆ ಮಲಗಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಹನೂರು ಹೋಬಳಿಯ ಕಂದಾಯ ನಿರೀಕ್ಷಕ ನಿರಂಜನ್, ಗ್ರಾಮ ಆಡಳಿತಾಧಿಕಾರಿ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರಕ್ಕೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…