ಚಾಮರಾಜನಗರ

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ: ಅರಣ್ಯಾಧಿಕಾರಿಗಳ ವಿರುದ್ಧ ಸಿಡಿದೆದ್ದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಗೋಪಾಲಸ್ವಾಮಿ ಬೆಟ್ಟದ ಗೇಟ್‌ ಬಳಿ ಜಮಾಯಿಸಿದ ರೈತರು, ಅರಣ್ಯಾಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತರು, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಶೂಟಿಂಗ್‌ ಮಾಡಲು ಖಾಸಗಿ ವಾಹನಕ್ಕೆ ಅವಕಾಶ ನೀಡಿದ್ದಾರೆ. ಕೇರಳ ರಾಜ್ಯದ ಖಾಸಗಿ ವಾಹನಗಳು ನೂರಾರು ಮಂದಿಯನ್ನು ಕರೆದೊಯ್ದು ಬೆಟ್ಟದಲ್ಲಿ ಶೂಟಿಂಗ್ ನಡೆಸಿವೆ. ಬೆಟ್ಟಕ್ಕೆ ತೆರಳಬೇಕಾದರೆ ಸರ್ಕಾರಿ ಬಸ್‌ನಲ್ಲಿ ಮಾತ್ರ ಅವಕಾಶವಿದೆ. ಖಾಸಗಿ ವಾಹನಕ್ಕೆ ಅವಕಾಶವೇ ಇಲ್ಲ. ಆದರೂ ಖಾಸಗಿ ವಾಹನಗಳನ್ನು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

7 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

7 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

8 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

8 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

8 hours ago