ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ.
ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ನಮ್ಮ ಅಪ್ಪ ಗೋವಿಂದ ಅವರು ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವನ ಜೊತೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ. ಮನೆಯ ಹಾಲ್‌ನಲ್ಲಿ ನೇಣು ಹಾಕಿಕೊಂಡಿದ್ದ ನಮ್ಮ ತಂದೆಯ ಅವರನ್ನು ತಮ್ಮನಾದ ವಿಶ್ವನು ನೇಣಿನ ಹಗ್ಗವನ್ನು ಕತ್ತರಿಸಿ ಕೆಳಗಿಳಿಸಿ ಮಂಚದ ಮೇಲೆ ಶವವನ್ನು ಇರಿಸಿಕೊಂಡಿದ್ದ, ಆದರೆ ನನ್ನ ತಂದೆಯ ಸಾವಿನ ಸಂಬಂಧ ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವರವರ ಮೇಲೆ ಅನುಮಾನವಿದೆ ಎಂದು ಹಿರಿಯ ಮಗನು ಪೊಲೀಸರಿಗೆ ದೂರು ನೀಡಿದ್ದಾನೆ.
ರಾಮಾಪುರ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತ್ರತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶಿಲೀಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…