ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ ಗುಂಡ್ಲುಪೇಟೆಯ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಈ ರೋಗದ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತಿದೆ.
ಇದನ್ನು ಓದಿ: HMPV ವೈರಸ್ ಪತ್ತೆ ಪ್ರಕರಣ | ಮುಂಜಾಗ್ರತೆಗೆ ಸಿಎಂ ಸೂಚನೆ
ಈ ವೈರಸ್ ನೆಗ್ಲೇರಿಯಾ ಪೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆ. ಕರ್ನಾಟಕದಲ್ಲಿ ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಕೇರಳ ರಾಜ್ಯದಲ್ಲಿ ಈ ಪ್ರಕರಣ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಅಗತ್ಯ ಎಂದು ಗುಂಡ್ಲುಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಮಾಹಿತಿ ನೀಡಿದ್ದಾರೆ.
ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸಬೇಕು. ಈ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…