ಚಾಮರಾಜನಗರ

ಮೆದುಳು ತಿನ್ನುವ ವೈರಸ್‌ ಭೀತಿ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರ

ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.

ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ ಗುಂಡ್ಲುಪೇಟೆಯ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಈ ರೋಗದ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತಿದೆ.

ಇದನ್ನು ಓದಿ: HMPV ವೈರಸ್‌ ಪತ್ತೆ ಪ್ರಕರಣ | ಮುಂಜಾಗ್ರತೆಗೆ ಸಿಎಂ ಸೂಚನೆ

ಈ ವೈರಸ್‌ ನೆಗ್ಲೇರಿಯಾ ಪೌಲೇರಿ ಎಂಬ ಪರಾವಲಂಬಿಯಿಂದ ಬರುವ ಅಪರೂಪದ ಕಾಯಿಲೆ. ಕರ್ನಾಟಕದಲ್ಲಿ ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಕೇರಳ ರಾಜ್ಯದಲ್ಲಿ ಈ ಪ್ರಕರಣ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಅಗತ್ಯ ಎಂದು ಗುಂಡ್ಲುಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಮಾಹಿತಿ ನೀಡಿದ್ದಾರೆ.

ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸಬೇಕು. ಈ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

34 mins ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

2 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

3 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

3 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

5 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

5 hours ago