ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೈಲೂರು ವನ್ಯ ಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ದೂಪದ ಮರದ ಹೊಡ್ಡು ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆಯಾಗಿದ್ದು, 8 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಳಿಕ ಆಗಸ್ಟ್ 27ರಂದೇ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಯಳಂದೂರು ವನ್ಯಜೀವಿ ವಲಯ ಪುರಾಣಿ ಶಾಖೆ ಬೇತಾಳ ಕಟ್ಟೆ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ ಗಂಡಾನೆಯು ಮೃತಪಟ್ಟಿತ್ತು. ಇದೇ ರೀತಿ ಆಗಸ್ಟ್ 30 ರಂದು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಬೈಲೂರು ವ್ಯಾಪ್ತಿಯಲ್ಲಿ ಮತ್ತೊಂದು ಆನೆ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಮಾತನಾಡಿರುವ ಬೈಲೂರು ವನ್ಯ ಜೀವಿ ವಲಯ ಅರಣ್ಯ ಪ್ರದೇಶದ ಆರ್‌ಎಫ್‌ಒ ಪ್ರಮೋದ್ ರಸ್ತೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಬಿದಿರಿನ ಪೊದೆಯಲ್ಲಿ ಆನೆ ಮೃತಪಟ್ಟಿರುವುದರಿಂದ ತಡವಾಗಿ ಗೊತ್ತಾಗಿದೆ. ನಮ್ಮ ಸಿಬ್ಬಂದಿಗಳು ಪ್ರತಿದಿನ ಗಸ್ತು ಮಾಡುತ್ತಾರೆ. ಈ ಎಲ್ಲಾ ಆನೆಗಳು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…