ಹನೂರು : ರಸಗೊಬ್ಬರದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಹನೂರು ಯುವ ಕಾಂಗ್ರೆಸ್ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಹನೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್ ಮಾತನಾಡಿ, ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆ ಏರಿಕೆ ಮಾಡಿ ರೈತರ ಬದುಕಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಗೊಬ್ಬರದ ಬೆಲೆ ಹೆಚ್ಚಳ ಮಾಡಿ, ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ರಸಗೊಬ್ಬರ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ರೈತರಿಗೆ ಮೋಸ ಮಾಡಿದೆ. ಗೊಬ್ಬರದ ಮೇಲಿನ ಸಬ್ಸಿಡಿ ತೆಗೆದಿದೆ. ಅಲ್ಲದೆ ಗೊಬ್ಬರದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯಲು ಕಷ್ಟವಾಗುತ್ತಿದೆ ಎಂದರು.
ರಾಮಾಪುರ ಬ್ಲಾಕ್ ಕಾಂಗ್ರೆಸ್ ಯುವ ಸಮಿತಿ ಅಧ್ಯಕ್ಷ ರಮೇಶ್, ಹನೂರು ಟೌನ್ ಅಧ್ಯಕ್ಷ ಸಂತೋಷ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸದಸ್ಯರಾದ ರಘು, ಮಂಜೇಶ್, ಮಲ್ಲು ನಾಯಕ, ಇನ್ನಿತರರು





