ಚಾಮರಾಜನಗರ

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ.

ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಲಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲದ ಆರ್​.ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದ್ದೇನು?
ಮುದಾಸಿರ್ ಮತ್ತು ಗುಲ್ನಾಜ್ ಭಾನು ಎಂಬವರ ವಿವಾಹ ಇಂದು (ಏಪ್ರಿಲ್ 29) ನಿಶ್ಚಯವಾಗಿತ್ತು. ಆದರೆ ಮಂಗಳವಾರ ರಾತ್ರಿ ನಡೆದ ಅರಶಿಣ ಶಾಸ್ತ್ರದ ವೇಳೆ ವರನ ಕಡೆಯವರು ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ವಧುವಿನ ಕುಟುಂಬಸ್ಥರು ತಕರಾರು ತೆಗೆದಿದ್ದರು. ಈ ಮನಸ್ಥಾಪದ ನಡುವೆಯೇ ಚಿನ್ನಾಭರಣದ ವಿಚಾರ ಮುನ್ನೆಲೆಗೆ ಬಂದಿದೆ. ವಧುವಿನ ಕಡೆಯವರು 100 ಗ್ರಾಂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ವರನ ಕಡೆಯವರು ಕೇವಲ 30 ಗ್ರಾಂ ಚಿನ್ನ ತಂದಿದ್ದರು. ಇದರಿಂದ ಆಕ್ರೋಶಗೊಂಡ ವಧುವಿನ ಕುಟುಂಬಸ್ಥರು ಮದುವೆಯೇ ಬೇಡ ಎಂದು ಗಲಾಟೆ ಆರಂಭಿಸಿದ್ದಾರೆ.

ಮರ್ಮಾಂಗಕ್ಕೆ ಒದ್ದು ಚಾಕು ಇರಿತ
ಬುಧವಾರ ಮುಂಜಾನೆ ವರನ ಪರವಾಗಿ ಸಂಬಂಧಿ ಮೊಹಮ್ಮದ್ ಕೈಸರ್ ರಾಜಿ ಮಾತುಕತೆಗೆ ತೆರಳಿದ್ದಾರೆ. ಈ ವೇಳೆ ತಮಿಳುನಾಡಿನಿಂದ ಬಂದಿದ್ದ ವಧುವಿನ ಸಂಬಂಧಿಕರು ರೊಚ್ಚಿಗೆದ್ದು ಕೈಸರ್ ಅವರ ಮರ್ಮಾಂಗಕ್ಕೆ ಒದ್ದು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯೆಬ್ ಹಾಗೂ ವಧುವಿನ ಕಡೆಯ ಫೈರೋಜ್ ಖಾನ್, ಅಬ್ದುಲ್ ವಾಹೀದ್ ಮತ್ತು ಅಬ್ದುಲ್ ಆರೀಫ್ ಮೇಲೂ ಹಲ್ಲೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago