ಚಾಮರಾಜನಗರ

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ

ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹನೂರು ಸುತ್ತಮುತ್ತಲಿನ ಗ್ರಾಮಗಳ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಹಲವು ವರ್ಷಗಳಿಂದ ನೀರಿನ ಕೊರತೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದ ಕೃಷಿಕರಿಗೆ ಕೆರೆ ಭರ್ತಿಯಾಗಿರುವುದು ಹೊಸ ಆಶಾಭಾವನೆ ಮೂಡಿಸಿದೆ.

ಶಾಸಕರ ಪ್ರಯತ್ನಕ್ಕೆ ಸಿಕ್ಕ ಜಯ: ಸತತ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದ್ದ ಸಂದರ್ಭದಲ್ಲಿ ಹನೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದ ಫಲವಾಗಿ ಕಾವೇರಿ ನದಿ ಮೂಲದಿಂದ ರಾಮನಗುಡ್ಡ ಕೆರೆಗೆ ನೀರು ತುಂಬಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಇದರ ಪರಿಣಾಮ ಬೇಸಿಗೆಯ ದಿನಗಳಲ್ಲಿಯೂ ಕೆರೆಯಲ್ಲಿ ನೀರು ಸಂಗ್ರಹವಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದೆ. ಕೆರೆಯಿಂದ ನೀರು ಹರಿಯುತ್ತಿರುವ ದೃಶ್ಯ ಸ್ಥಳೀಯರಲ್ಲಿ ಹರ್ಷದ ವಾತಾವರಣ ಮೂಡಿಸಿದೆ. ಶಾಸಕರ ಈ ದೂರದೃಷ್ಟಿಯ ನಡೆ ಇಂದು ಫಲ ನೀಡಿದ್ದು, ರೈತ ಸಮುದಾಯ ಅವರಿಗೆ ಅಭಿನಂದನೆ ಸಲ್ಲಿಸುತ್ತಿದೆ.

980 ಎಕರೆ ಅಚ್ಚುಕಟ್ಟಿಗೆ ವರದಾನ: ರಾಮನ ಗುಡ್ಡ ಜಲಾಶಯದಲ್ಲಿ ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ರಾಮನಗುಡ್ಡ ಕೆರೆಯ ಅಚ್ಚುಕಟ್ಟು ಪ್ರದೇಶ ಸುಮಾರು 980 ಎಕರೆಗಳಷ್ಟಿದೆ.

ಕೆರೆ ಸಂಪೂರ್ಣ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಕೃಷಿ ಭೂಮಿಗಳಿಗೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆ ಇದ್ದು, ರೈತರು ಕೃಷಿ ಚಟುವಟಿಕೆಗಳನ್ನು ಹೆಚ್ಚಿನ ಆತ್ಮವಿಶ್ವಾಸದಿಂದ ಕೈಗೊಳ್ಳಲು ಅನುಕೂಲವಾಗಲಿದೆ. ಈಗಾಗಲೇ ಕೆರೆಯ ಅಚ್ಚುಕಟ್ಟು ಪ್ರದೇಶ ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು, ಉತ್ತಮ ಬೆಳೆಯ ನಿರೀಕ್ಷೆ ರೈತರಲ್ಲಿ ಮೂಡಿದೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಳದ ನಿರೀಕ್ಷೆ: ರಾಮನಗುಡ್ಡ ಕೆರೆ ಭರ್ತಿಯಾಗಿರುವುದರಿಂದ ಕೇವಲ ಅಚ್ಚುಕಟ್ಟು ಪ್ರದೇಶದ ಕೃಷಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಹಲವು ಗ್ರಾಮಗಳ ಅಂತರ್ಜಲ ಮಟ್ಟ ಸುಧಾರಣೆಯಾಗುವ ನಿರೀಕ್ಷೆಯೂ ಹೆಚ್ಚಾಗಿದೆ. ಕೆರೆಯಿಂದ ಹಾಗೂ ಹಳ್ಳದ ಮೂಲಕ ನೀರು ಹರಿದು ಬರುವುದರಿಂದ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ, ತೋಮಿಯರ್ ಪಾಳ್ಯ, ಕೆ.ವಿ.ಎನ್. ದೊಡ್ಡಿ, ಎಂ.ಟಿ. ದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ತೋಡುಬಾವಿ ಮತ್ತು ಕೊಳವೆಬಾವಿಗಳಿಗೆ ನೀರಿನ ಮರುಪೂರೈಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ ದಿನಗಳಲ್ಲಿ ಈ ಭಾಗದ ತೆರೆದ ಬಾವಿಗಳು ಹಾಗೂ ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಾದರೆ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಅನುಕೂಲವಾಗಲಿದೆ. ಕುಡಿಯುವ ನೀರಿನ ಮೂಲಗಳ ಮೇಲಿನ ಒತ್ತಡವೂ ಕಡಿಮೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆಯಿಂದ ಸಂಕಷ್ಟಕ್ಕೊಳಗಾಗುವ ಜಾನುವಾರುಗಳಿಗೂ ಕೆರೆಯ ನೀರು ಆಶ್ರಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago