Mysore
27
thunderstorm

Social Media

ಶನಿವಾರ, 28 ಮಾರ್ಚ್ 2026
Light
Dark

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ: ಪರಿಸರ ಪ್ರೇಮಿಗಳ ಆಕ್ರೋಶ

ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ 2016ರಿಂದಲೂ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ ಹಾಗೂ ಪ್ಲಾಸ್ಟಿಕ್‌ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೊಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪರಿಸರ ಪ್ರೇಮಿಗಳು ಪ್ರಶ್ನೆ ಹಾಕುತ್ತಿದ್ದಾರೆ.

Tags:
error: Content is protected !!