ಚಾಮರಾಜನಗರ

ಫೈನಾನ್ಸ್‌ ಹಾವಳಿ | ಊರು ತೊರೆದೆ 100ಕ್ಕೂ ಅಧಿಕ ಕುಟುಂಬ!

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು 

ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ.  ಫೈನಾನ್ಸ್‌ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ ಇಂತದ್ದೆ ಘಟನೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್‌ ಹಾವಳಿಗೆ ಬೇಸತ್ತು  ಬರೋಬ್ಬರಿ 100 ಕುಟುಂಬಗಳು ಊರು ತೊರೆದಿವೆ.

ಯಾವಾಗಲೂ ಜನರಿಂದ  ತುಂಬಿದ್ದ ಊರು, ಇದೀಗ ಬರಿದಾಗಿ ಕಾಣುತ್ತಿದೆ. ಮನೆಗೆಲ್ಲಾ ಬೀಗ ಹಾಕಿ ಕುಟುಂಬಗಳು ಊರು ತೊರೆದಿವೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ  ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋಗಿದ್ದಾರೆ ಎಂಬುದೆ ತೋಚುತ್ತಿಲ್ಲ ಎನ್ನುತ್ತಾರೆ ಅಳಿದುಳಿದ ಜನರು.

ಮೈಕ್ರೋ ಫೈನಾನ್ಸ್‌ ಕಂಪನಿಗಳು ಆರಂಭದಲ್ಲಿ ಸಾಲ ನೀಡಲು ಪುಸಲಾಯಿಸುತ್ತಾರೆ. ಸಾಲ ನೀಡಿದ ನಂತರ ಹಣ ಕಟ್ಟಲು ಒಂದು ದಿನ ತಡವಾದರು ತುಂಬಾ ತೊಂದರೆ ನೀಡುತ್ತಾರೆ. ಮನೆಗೆ ಬಂದು ಕೆಟ್ಟ ಮಾತುಗಳನ್ನು ಆಡುತ್ತಾರೆ. ಇವರ ಕಾಟ ತಾಳಲಾರದೆ ನಮ್ಮ ತಂದೆ-ತಾಯಿ ಊರು ತೊರೆದಿದ್ದಾರೆ ಎಂದು ಗ್ರಾಮದ ಯುವಕ ಅಳಲು ತೋಡಿಕೊಂಡಿದ್ದಾನೆ.

ತಮ್ಮ ತಂದೆ-ತಾಯಿ ಊರು ತೊರೆದಿರುವುದಕ್ಕೆ ಕಣ್ಣೀರು ಹಾಕುತ್ತಾ,  ಫೈನಾನ್ಸ್‌ ಕಂಪನಿಗಳಿಂದ ನಮಗೆ ಮುಕ್ತಿ ಕೊಡಿಸಿ. ಸರ್ಕಾರ ನನಗೆ ಏನಾದರೂ ಅನುಮತಿ ನೀಡಿದರೆ ನನ್ನ ಕಿಡ್ನಿ ಮಾರಿ ಆದರೂ ನಾನು ಸಾಲ ತೀರಿಸುತ್ತೇನೆ. ನಮ್ಮ ತಂದೆ ತಾಯಿ ಇಲ್ಲದೇ ನಾನು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಇರುವಂತಹ ಪರಿಸ್ಥಿತಿ ಬಂದಿದೆ ಎಂದು ಯುವಕ ಅಳಲು ತೋಡಿಕೊಂಡನು.

ಗ್ರಾಮದ ಶ್ರೀಕಂಠ ಎಂಬಾತ ಎರಡು ಕಂಪನಿಗಳಿಂದ ಒಟ್ಟು 3 ಲಕ್ಷ ಸಾಲ ಪಡೆದಿದ್ದಾನೆ. ನಂತರ ಸಾಲ ಕಟ್ಟಲು ಸ್ವಲ್ಪ ಸಮಯ ತಡವಾದ ಕಾರಣ 3 ಲಕ್ಷಕ್ಕೆ ಬಡ್ಡಿ ಸೇರಿಸಿ ಒಟ್ಟು 6 ಲಕ್ಷ ಕಟ್ಟಬೇಕೆಂದು ಕಂಪನಿಯವರು ಆತನಿಗೆ ತೊಂದರೆ ನೀಡಿದ್ದಾರೆ. ಇದರಿಂದ ಆ ಕುಟುಂಬ ಊರು ತೊರೆದಿದೆ. ಇದೇ ರೀತಿ ಊರಿನ 100ಕ್ಕೂ ಹೆಚ್ಚು ಕುಟಂಬಗಳು ಸಾಲ ಬಾಧೆ ತಾಳಲಾಗದೆ ಊರು ತೊರೆದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago