ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಬೆಟ್ಟದಲ್ಲಿರುವ 10ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆ ಅನುಮತಿ ಪಡೆಯದೇ ಪ್ರಾಧಿಕಾರದಿಂದ ಮರಗಳ ಹನನ ನಡೆದಿದೆ.
ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯಿಂದ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಾಧಿಕಾರದ ಇಂಜಿನಿಯರ್ ಮತ್ತು ಜೆಸಿಬಿ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯದರ್ಶಿ ವಿರುದ್ಧವೂ ಎಫ್‌ಐಆರ್ ದಾಖಲಿಸಲು ಅರಣ್ಯ ಇಲಾಖೆ ನ್ಯಾಯಾಲಯಕ್ಕೆ ಅನುಮತಿ ಕೋರಿದೆ.




