ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಬೆಟ್ಟದಲ್ಲಿರುವ 10ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆ ಅನುಮತಿ ಪಡೆಯದೇ ಪ್ರಾಧಿಕಾರದಿಂದ ಮರಗಳ ಹನನ ನಡೆದಿದೆ.
ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯಿಂದ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಾಧಿಕಾರದ ಇಂಜಿನಿಯರ್ ಮತ್ತು ಜೆಸಿಬಿ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯದರ್ಶಿ ವಿರುದ್ಧವೂ ಎಫ್‌ಐಆರ್ ದಾಖಲಿಸಲು ಅರಣ್ಯ ಇಲಾಖೆ ನ್ಯಾಯಾಲಯಕ್ಕೆ ಅನುಮತಿ ಕೋರಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…
ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ…