Mysore
31
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.

ಗಾಯಗೊಂಡ ದಂಪತಿಯನ್ನು ಪರಮೇಶ್‌ ಹಾಗೂ ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಕೆಯಾಗಿದ್ದರಿಂದ ಮನೆ ತುಂಬಾ ಬೆಂಕಿ ವ್ಯಾಪಿಸಿದೆ. ಪರಿಣಾಮ ಮನೆಯಲ್ಲಿದ್ದ ಪಾತ್ರೆ, ಸ್ಟವ್‌, ದವಸ ಧಾನ್ಯ ಸುಟ್ಟು ಭಸ್ಮವಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ದಂಪತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!