ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ.
ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು ಪ್ರಸಾದ ತಯಾರಿಕ ಕೇಂದ್ರದಲ್ಲಿ ನಡೆದ ಅಗ್ನಿ ಅವಘಡದಲ್ಲಿ 36,220 ಲಾಡು, 28 ಟಿನ್ ಎಣ್ಣೆ, 50 ಕೆಜಿಯ 9 ಮೂಟೆ ಸಕ್ಕರೆ, 30 ಕೆಜಿ ದ್ರಾಕ್ಷಿ, 40 ಕೆಜಿ ನಂದಿನಿ ತುಪ್ಪ, 96 ಕೆಜಿ ಕಡ್ಲೆ ಹಿಟ್ಟು ಸಿಲಿಂಡರ್ ಪೈಪ್ ಲೈನ್ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 10.2 ಲಕ್ಷ ನಷ್ಟ ಉಂಟಾಗಿದೆ ಎಂದು ಸರಸ್ವತಿ ತಿಳಿಸಿದ್ದಾರೆ.
ನೌಕರ ಅಮಾನತು : ಲಾಡು ಪ್ರಸಾದ ತಯಾರಿಕ ಘಟಕದಲ್ಲಿ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಬಿದ್ದು ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಕೆ.ಪಿ. ಮಹದೇವಸ್ವಾಮಿ ಅವರನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಹಿರಿಯ ಅಧಿಕಾರಿಗಳ ಆದೇಶದನ್ವಯ ಲಾಡು ಪ್ರಸಾದ ಘಟಕದ ದ್ವಿತೀಯ ದರ್ಜೆ ಸಹಾಯಕ ಕೆಪಿ ಮಹದೇವಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ, ಘಟನೆಯ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಸರಸ್ವತಿ ತಿಳಿಸಿದ್ದಾರೆ.
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…