Mysore
31
scattered clouds

Social Media

ಗುರುವಾರ, 12 ಮಾರ್ಚ್ 2026
Light
Dark

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್‌, ದಾಖಲೆಗಳು, ಲೆಕ್ಕಪತ್ರಗಳು ಸುಟ್ಟು ಕರಕಲಾಗಿವೆ. ಸಿಪಿಐ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯಲ್ಲಿದ್ದ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಪಿಐ ಕಚೇರಿಯಲ್ಲಿ ಬೆಂಕಿ ಅವಘಡ ಆಕಸ್ಮಿಕವೋ ಅಥವಾ ಪೂರ್ವ ನಿಯೋಜಿತವೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು, ಅಗ್ನಿಶಾಮಕ ದಳ ಬೀಡುಬಿಟ್ಟಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

 

Tags:
error: Content is protected !!