ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್, ದಾಖಲೆಗಳು, ಲೆಕ್ಕಪತ್ರಗಳು ಸುಟ್ಟು ಕರಕಲಾಗಿವೆ. ಸಿಪಿಐ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯಲ್ಲಿದ್ದ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಪಿಐ ಕಚೇರಿಯಲ್ಲಿ ಬೆಂಕಿ ಅವಘಡ ಆಕಸ್ಮಿಕವೋ ಅಥವಾ ಪೂರ್ವ ನಿಯೋಜಿತವೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು, ಅಗ್ನಿಶಾಮಕ ದಳ ಬೀಡುಬಿಟ್ಟಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…