ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಯಿಂದ ಒಂದು ಅಂಗಡಿಯು ಬೆಂಕಿಯಿಂದ ಹೊತ್ತು ಉರಿದಿದ್ದು, ಬೆಂಕಿ ಮತ್ತಷ್ಟು ವ್ಯಾಪಿಸಿ ಮತ್ತೊಂದು ಅಂಗಡಿಗೆ ತಗುಲಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿ ಹತ್ತಾರು ಹೋಟೆಲ್ ಹಾಗೂ ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ಈ ಅಗ್ನಿ ಅವಘಡದದಿಂದ ಹೋಟೆಲ್‌ನಲ್ಲಿ ಇದ್ದ ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಪೋಟಗೊಂಡು ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಿದೆ. ಇದರಿಂದ ಕೆಲಕಾಲ ಆತಂಕವೂ ಸೃಷ್ಟಿಯಾಗಿತ್ತು. ಅದೃಷ್ಟವಶಾತ್ ಹೋಟೆಲ್‌ನಲ್ಲಿ ಯಾರು ಜನ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟಿ ಬೂದಿಯಾಗಿವೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.





