ಚಾಮರಾಜನಗರ

ಬಿಳಿರಂಗನಬೆಟ್ಟದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಹೋಟೆಲ್‌, ಅಂಗಡಿ ಮಳಿಗೆಗಳು

ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ಯಿಂದ ಒಂದು ಅಂಗಡಿಯು ಬೆಂಕಿಯಿಂದ ಹೊತ್ತು ಉರಿದಿದ್ದು, ಬೆಂಕಿ ಮತ್ತಷ್ಟು ವ್ಯಾಪಿಸಿ ಮತ್ತೊಂದು ಅಂಗಡಿಗೆ ತಗುಲಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿ ಹತ್ತಾರು ಹೋಟೆಲ್‌ ಹಾಗೂ ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಈ ಅಗ್ನಿ ಅವಘಡದದಿಂದ ಹೋಟೆಲ್‌ನಲ್ಲಿ ಇದ್ದ ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಪೋಟಗೊಂಡು ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಿದೆ. ಇದರಿಂದ ಕೆಲಕಾಲ ಆತಂಕವೂ ಸೃಷ್ಟಿಯಾಗಿತ್ತು. ಅದೃಷ್ಟವಶಾತ್‌ ಹೋಟೆಲ್‌ನಲ್ಲಿ ಯಾರು ಜನ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟಿ ಬೂದಿಯಾಗಿವೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago