ಚಾಮರಾಜನಗರ

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಕೊಳ್ಳೇಗಾಲದಲ್ಲಿ ಪ್ರವಾಹ ಆತಂಕ

ಕೊಳ್ಳೇಗಾಲ: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ.

ಕಾವೇರಿ ಜಲಾನಯನ ಪ್ರದೇಶ ಹಾಗೂ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಹಾಗೂ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎರಡೂ ಜಲಾಶಯಗಳಿಂದಲೂ ಅಪಾರ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ಹಾಗೂ ಕಪಿಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊಳ್ಳೇಗಾಲದ ನದಿ ತೀರದ ಗ್ರಾಮಗಳಾದ ದಾಸನಪುರ, ಹಂಪಾಪರ, ಸರಗೂರು ಸೇರಿದಂತೆ ಅನೇಕ ಹಳ್ಳಿಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಈಗಾಗಲೇ ಹತ್ತಾರು ಎಕರೆ ಜಮೀನು ಜಲಾವೃತಗೊಂಡಿದ್ದು, ನೀರಿನ ಹರಿವು ಮತ್ತಷ್ಟು ಹೆಚ್ಚಾದರೆ ಜನ-ಜಾನುವಾರುಗಳಿಗೆ ಭಾರೀ ಸಂಕಷ್ಟ ಎದುರಾಗಲಿದೆ.

ಈ ಹಳ್ಳಿಗಳಿಗೆ ಜಲಾಶಯದಿಂದ ನೀರು ಬಿಡುವುದಕ್ಕೂ ಮುಂಚೆಯೇ ಎಚ್ಚರಿಕೆ ನೀಡಲಾಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಸಹ ಪ್ರವಾಹ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

22 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

22 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

22 hours ago