ಚಾಮರಾಜನಗರ

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹುಂಡಿ ಹಣ ಎಣಿಕೆಯಲ್ಲಿ ಕೇವಲ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರೂ. ಸಂಗ್ರಹವಾಗಿದ್ದು ಇತಿಹಾಸ ಪುಟ ಸೇರಿಕೊಂಡಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ಸಂಜೆ 8 ಗಂಟೆಯವರೆಗೂ ನಡೆಯಿತು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಮೂಲಕ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 3,41,44,208 ನಗದು 71 ಗ್ರಾಂ ಚಿನ್ನ ಹಾಗೂ 2,050 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇ ಹುಂಡಿಯಿಂದ 65,5,620 ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 6 ನೋಟುಗಳು, ವಿದೇಶಿ 19 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.

ಭಕ್ತಾದಿಗಳಿಗೆ ವಿಶೇಷ ವ್ಯವಸ್ಥೆಯಿಂದ ಹೆಚ್ಚಿದ ಹುಂಡಿ ಹಣ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಎರಡು ವರ್ಷಗಳಿಂದ ಭಕ್ತಾದಿಗಳ ಅನುಕೂಲಕ್ಕಾಗಿ ನೂರಾರು ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ಯೂ ಲೈನ್, ಡಾರ್ಮೆಟ್ರಿ, ವಜ್ರಮಲೆ ವಸತಿಗೃಹ, ವಿಶೇಷ ದಾಸೋಹ ಸೇರಿದಂತೆ ಇನ್ನಿತರ ಮೂಲಭೂತ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ ಇದಲ್ಲದೆ ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರು ನೆರಳಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಇದಲ್ಲದೆ ಭಕ್ತಾದಿಗಳಿಗೆ ನೀಡುವ ಪ್ರಸಾದದಲ್ಲಿ ಬದಲಾವಣೆ ತರಲಾಗಿದ್ದು, ಗುಣಮಟ್ಟದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿರುವುದರಿಂದ ಈ ಬಾರಿಯ ಹುಂಡಿ ಎಣಿಕೆಯಲ್ಲಿ ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಕಳೆದ ಎರಡು ವರ್ಷಗಳಿಂದ ಶ್ರೀ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಭಕ್ತಾದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಪ್ರೋತ್ಸಾಹದಿಂದ ಕಾಮಗಾರಿಗಳು ಪೂರ್ಣ ಹಂತಕ್ಕೆ ತಲುಪಿದೆ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಭಕ್ತಾದಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ದಸರ ಮಾದರಿಯಲ್ಲಿ ವಿಶೇಷ ವಿದ್ಯುತ್ ಈ ಆಲಂಕಾರ ಮಾಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. ಕಳೆದ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮೂರು ಕೋಟಿ 30 ಲಕ್ಷ ಸಂಗ್ರಹವಾಗಿತ್ತು. ಈ ಬಾರಿಯ ಹುಂಡಿ ಎಣಿಕೆಯಲ್ಲಿ ದಾಖಲೆಯ ಮೊತ್ತ ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಭಕ್ತಾದಿಗಳ ಅಗತ್ಯತೆಗೆ ತಕ್ಕಂತೆ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಆಂದೋಲನಕ್ಕೆ ತಿಳಿಸಿದರು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಲೆಕ್ಕಾದೀಕ್ಷಕರಾದ ಗುರುಮಲ್ಲಯ್ಯ, ಲೆಕ್ಕಪತ್ರ ಸಲಹೆಗಾರರಾದ ಮಹದೇವು, ಜಿಲ್ಲಾಡಳಿತ ಕಚೇರಿಯ ಶ್ವೇತ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

1 hour ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

9 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

9 hours ago