ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಸಂಜೆ ಕೊಟ್ಟಿಗೆ ಮಾದರಿ ಬೋನನ್ನು ಅಳವಡಿಸಿ ಚಿರತೆ ಸೆರೆಗೆ ಬಲೆ ಬೀಸಿದ್ದಾರೆ.
ಚಾಮರಾಜನಗರ ಬಫರ್ ಜೋನ್‌ನ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್ ಅವರಿಂದು ಮಹಂತಾಳಪುರಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಚಿರತೆ ದಾಳಿಯಿಂದ ಕರುವನ್ನು ಕಳೆದುಕೊಂಡಿರುವ ಕಮಲಮ್ಮ ಅವರಿಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.