ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಉದ್ವಿಗ್ನತೆ ಮುಂದುವರೆದಿದೆ. ಬುಧವಾರ ರಾತ್ರಿ ಶಿಲುಬೆಪುರ ಅರಣ್ಯದ ವಿವಿಧ ಕಡೆಗಳಲ್ಲಿ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರೂ ಸುಮಾರು 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮರಗಿಡಗಳು, ಪೊದೆಗಳು ಮತ್ತು ವನ್ಯಜೀವಿಗಳ ಆವಾಸಸ್ಥಾನಕ್ಕೆ ಭಾರಿ ಹಾನಿಯಾಗಿದೆ.
ಇದೇ ವೇಳೆ ಜಾಗೇರಿ ಬಳಿ ಇರುವ ಒಂದು ಕಳ್ಳಬೇಟೆ ತಡೆ ಶಿಬಿರವನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಶಿಬಿರದಲ್ಲಿದ್ದ ಸಾಮಗ್ರಿಗಳನ್ನು ಒಡೆದು ಹಾಕಿ ಬೆಂಕಿ ಹಚ್ಚಿರುವುದಾಗಿ ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.
ಹೊಳೆಮುರಿದಟ್ಟಿ ಶೂಟೌಟ್ ಪ್ರಕರಣದ ಬಳಿಕ ಈ ಭಾಗದಲ್ಲಿ ನಿರಂತರವಾಗಿ ಅಶಾಂತಿ ಕಂಡುಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ಒಂದೊಂದೇ ವಿಡಿಯೋಗಳನ್ನು ಅರಣ್ಯ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ರಿಲೀಸ್ ಮಾಡುತ್ತಿದ್ದು, ಸತ್ಯಾಸತ್ಯತೆ ಹೊರಬರುತ್ತಿದೆ. ಆದರೂ ಕಿಡಿಗೇಡಿಗಳ ಹಾವಳಿ ಮಾತ್ರ ನಿಲ್ಲುತ್ತಿಲ್ಲ.
ಘಟನೆ ನಡೆದ ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳ ಪತ್ತೆಗೆ ಬೇಟೆ ಆರಂಭಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸೂಕ್ತ ಬಂದೋಬಸ್ತ್ ಕೂಡ ಮಾಡಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…