ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಪ್ರವೀಣ್ ನೇತೃತ್ವದಲ್ಲಿ ಅಧಿಕಾರಿಗಳು ಅರಣ್ಯಕ್ಕೆ ತೆರಳಿ ಬೆಂಕಿ ನಂದಿಸುತ್ತಿದ್ದಾರೆ.
ಅರಣ್ಯ ಪ್ರದೇಶದಲ್ಲಿರುವ ಬೆಲೆಬಾಳುವ ಮರಗಿಡಗಳು ಸುಟ್ಟುಹೋಗಿದ್ದು, ಪ್ರಾಣಿ-ಪಕ್ಷಿಗಳು ಸಹ ದಿಕ್ಕಾಪಾಲಾಗಿ ಓಡಿ ಹೋಗಿವೆ ಎಂದು ತಿಳಿದುಬಂದಿದೆ.





