ಚಾಮರಾಜನಗರ

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ.

ಬೆಳಿಗ್ಗೆ ಕ್ಯಾಂಪ್ ನಲ್ಲಿ ತಿಂಡಿ ತಿಂದು ಹೊರ ಬಂದಿದ್ದಾರೆ ಕ್ಯಾಂಪ್ ನಿಂದ ೫೦೦ ಮೀಟರ್ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಬಂಡೀಪುರ ಮರಳಹಳ್ಳ ಕ್ಯಾಂಪ್‌ ಬಳಿ ಗಸ್ತು ತಿರುಗುತ್ತಿದ್ದ ವೇಳೆ ವಾಚರ್‌ ಮೇಲೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ.

ಇದನ್ನು ಓದಿ:ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮೃತ ಸಣ್ಣಹೈದ ಹುಣಸೂರು ಮೂಲದ ನೇರಳೆಕುಪ್ಪಿ ಎಂಬ ಗ್ರಾಮದವರಾಗಿದ್ದು ಮೃತನಿಗೆ ಪತ್ನಿ ಹಾಗೂ ಐವರು ಮಕ್ಕಳಿದ್ದು ಒಬ್ಬ ಪುತ್ರ ಅರಣ್ಯ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುತಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆಯಿಂದ ಮೃತ ನೌಕರನ ಕುಟುಂಬಕ್ಕೆ ೪೫ ಲಕ್ಷ ಪರಿಹಾರ ನೀಡುವುದಾಗಿ ಬಂಡೀಪುರ ವಲಯಾಧಿಕಾರಿ ಮಹದೇವ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago