ಚಾಮರಾಜನಗರ

ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ತುಂಬಿಸಲು ಬಜೆಟ್‌ನಲ್ಲಿ ಅನುಮೋದನೆ ಸಿಗುವ ವಿಶ್ವಾಸ: ಮಾಜಿ ಶಾಸಕ ಆರ್.‌ನರೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ ಸಂಘದ ಹೋರಾಟಗಾರರ ಶ್ರಮ ಹಾಗೂ ಸರ್ಕಾರದ ಸಹಕಾರದಿಂದ ಉಡುತೊರೆ ಹಳ್ಳ ಜಲಾಶಯಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರು ತುಂಬಿಸುವ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ಸಿಗುವ ಆಶಾ ಭಾವನೆ ಇದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾನು ಶಾಸಕನಾಗಿದ್ದಾಗ ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಾದ ಹುಬ್ಬೆ ಹುಣಸೆ, ರಾಮನ ಗುಡ್ಡ, ಗುಂಡಾಲ್ ಜಲಾಶಯಗಳಿಗೆ 132 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಗುಂಡಾಲ್ ಜಲಾಶಯಕ್ಕೆ ನೀರು ತುಂಬಿಸಲಾಗಿತ್ತು.

ಈ ವೇಳೆ ರಾಮಾಪುರ ಹೋಬಳಿ ವ್ಯಾಪ್ತಿಯ ರೈತರು ಉಡುತೊರೆ ಹಳ್ಳ ಜಲಾಶಯ, ಕೀರೆಪಾತಿ, ಹಾಲೇರಿಕೆರೆ ನೀರು ತುಂಬಿಸುವಂತೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದ್ದರು. ನಾನು ಸಹ ಬರಪೀಡಿತ ಪ್ರದೇಶಗಳಿಗೆ ನೀರು ತುಂಬಿಸುವುದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೆ. ಅದರಂತೆ 110 ಕೋಟಿ ವೆಚ್ಚದಲ್ಲಿ ಡಿಪಿಆರ್ ಮಾಡಲಾಗಿತ್ತು.

ಇನ್ನೇನು ಹೊಸ ಯೋಜನೆಗೆ ಅನುಮೋದನೆಗೊಂಡು ದೊಡ್ಡ ಪೈಪ್ ಅಳವಡಿಕೆ ಮಾಡಿದರೆ ರಾಮನಗುಡ್ಡ ಹಾಗೂ ಜಲಾಶಯಗಳಿಗೆ ಕಡಿಮೆ ದಿನಗಳ ಅವಧಿಯಲ್ಲಿ ನೀರು ತುಂಬಿಸಬಹುದು ಎಂದು ಅಂದುಕೊಂಡಿದ್ದೆವು, ಆದರೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಬದಲಾವಣೆಯಾದ ನಂತರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಅನುದಾನ ನೀಡದೆ ಇರುವುದರಿಂದ ಏತ ನೀರಾವರಿ ಯೋಜನೆ ಸ್ಥಗಿತವಾಗಿತ್ತು. ಒಟ್ಟಾರೆ ಕೆಲವು ಬದಲಾವಣೆಗಳಿಂದ ಎರಡು ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿಯು ವಿಳಂಬವಾಯಿತು ಎಂದು ಸ್ಪಷ್ಟಪಡಿಸಿದರು.

ಇದೀಗ ರಾಮಪುರ ಹೋಬಳಿ ವ್ಯಾಪ್ತಿಯ ಪ್ರಮುಖ ಜಲಾಶಯಗಳು ಸೇರಿದಂತೆ ಕೆರೆಕಟ್ಟೆಗಳಿಗೆ ನೀರು ತುಂಬಿಸುವ 490 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಅನುದಾನ ನೀಡುವಂತೆ ಕಳೆದ ವಾರ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ರವರು ಸಂಸದರಾದ ಸುನೀಲ್ ಬೋಸ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಮಹದೇವಪ್ಪ ರವರು ಸಹ ಮುಖ್ಯಮಂತ್ರಿಗಳ ಬೇರೆ ಒತ್ತಡ ಹಾಕಿ ಈ ನೀರಾವರಿ ಯೋಜನೆ ಅನುಷ್ಠಾನ ಆಗಲೇಬೇಕು ಎಂದಿರುವುದರಿಂದ ಮುಖ್ಯಮಂತ್ರಿಗಳು ಸಹ ಬಜೆಟ್ ನಲ್ಲಿ ಸೇರ್ಪಡೆ ಮಾಡಿ ಸುಮಾರು 70 ಕೋಟಿ ಅನುದಾನ ನೀಡುವ ವಿಶ್ವಾಸವಿದೆ ಎಂದರು.

ಒಟ್ಟಾರೆ ಒಂದು ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನಿರ್ಣಯ ಮಾಡಿದ ನಂತರ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸೂಚಿಸಿದರೆ ಯಾವ ಸರ್ಕಾರ ಬಂದರು ಯೋಜನೆ ಅನುಷ್ಠಾನಗೊಳ್ಳಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಮ್ಮ ಭಾಗದ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೇ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈಗಾಗಲೇ ಅಧಿಕಾರಿಗಳು ಸಮಸ್ಯೆ ಇರುವ ಕಡೆ ಭೇಟಿ ನೀಡಿದ್ದಾರೆ. ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ತುರ್ತು ಕೊಳವೆಬಾವಿ ಕೊರಸಬೇಕಿದೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಮುಂದಿನ ದಿನಗಳಲ್ಲಿ ಮತ್ತಷ್ಟು ಬೇಸಿಗೆ ಹೆಚ್ಚಾಗುವುದರಿಂದ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿರುವುದರಿಂದ ಪ್ರತಿನಿತ್ಯ ಒಂದಲ್ಲ ಒಂದು ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಸಾವು ನೋವುಗಳು ಉಂಟಾಗುತ್ತಿದೆ ಸರ್ಕಾರ ಪರಿಹಾರ ನೀಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಇದರ ಬದಲು ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳಿಂದ ಆಗುವ ಬೆಳೆ ನಾಶಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಪ್ರಸ್ತುತ ನೀಡುತ್ತಿರುವ ಪರಿಹಾರ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಮಾಡಿ ರೈತರಿಗೆ ನೆರವಾಗಬೇಕು ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago